Breaking News

ಕೋವಿಡ್ ಏರಿಕೆ : 1ರಿಂದ 9ನೇ ತರಗತಿ ಶಾಲೆ ತರಗತಿ ಬಂದ್

ಬೆಳಗಾವಿ: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಮಾಡಲಾಗಿದೆ. 
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜ.11ರಿಂದ 18ರವರೆಗೆ ವಸತಿ ಶಾಲೆಗಳೂ ಸೇರಿದಂತೆ ಎಲ್ಲ ಮಾಧ್ಯಮಗಳ 1ರಿಂದ 9ನೇ ತರಗತಿ ಶಾಲೆಗಳನ್ನು ಬಂದ್ ಮಾಡುವಂತೆ ಸೋಮವಾರ ಆದೇಶ ಹೊರಡಿಸಿದ್ದೇನೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದರು.

ಅಧಿಕಾರಿಗಳ ಸಭೆಯ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೊರೊನಾ ಹರಡುವಿಕೆ ತಡೆಗಟ್ಟುವ ಉದ್ದೇಶದಿಂದ ಮತ್ತು ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ತೆರೆಯದಂತೆ ತೀರ್ಮಾನ ಕೈಗೊಳ್ಳಲಾಗಿದೆ. ಡಿಎಚ್‍ಒ, ಡಿಡಿಪಿಐ ಮೊದಲಾದವರೊಂದಿಗೆ ಚರ್ಚಿಸಿ ಮುಖ್ಯ ಕಾರ್ಯದರ್ಶಿ ಗಮನಕ್ಕೆ ತರಲಾಗಿದೆ ಎಂದು ಮಾಹಿತಿ ನೀಡಿದರು.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *