ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ನಿನ್ನೆಯಷ್ಟೇ ಸಿಎಂ ಬೊಮ್ಮಾಯಿ ಅವರಿಗೆ ಸೋಂಕು ದೃಢಪಟ್ಟಿದ್ದು, ಕುಟುಂಬದವರು ಪರೀಕ್ಷೆ ಮಾಡಿಸಿದ್ದಾರೆ.ಈ ವೇಳೆ ಪುತ್ರ ಭರತ್‌ಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಬಗ್ಗೆ ಭರತ್ ಟ್ವೀಟ್ ಮಾಡಿದ್ದು, ನನಗೆ ಕೋವಿಡ್ ಸೋಂಕು ತಗುಲಿದೆ. ಸೌಮ್ಯ ಲಕ್ಷಣಗಳಿವೆ. ಮನೆಯಲ್ಲೇ ಐಸೋಲೇಟ್ ಆಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದ ಎಲ್ಲರೂ ದಯವಿಟ್ಟು ಕೋವಿಡ್ ಟೆಸ್ಟ್ ಮಾಡಿಸಿ, ಮನೆಯಲ್ಲೇ ಇರಿ, ಆರೋಗ್ಯವಾಗಿರಿ ಎಂದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

