ಬೆಂಗಳೂರು :ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು.
ಕಲಾಸಿಪಾಳ್ಯದ ಪಾಪುರಲ್ ಆಟೊ ಮೊಬೈಲ್ ವೃತ್ತದಲ್ಲಿ ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆ ಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ನಾಲ್ಕೈದು ವರ್ಷಗಳ ಹಿಂದೆ, ಅಂದರೆ ನಾನು ಶಾಸಕನಾಗಿ ಬರುವ ಮೊದಲು ಸಾಕಷ್ಟು ಅವ್ಯವಸ್ಥೆಗಳಿದ್ದವು. ರಸ್ತೆಗಳು, ಒಳಚರಂಡಿ ವ್ಯವಸ್ಥೆಗಳು ತೀವ್ರ ಹದಗೆಟ್ಟಿದ್ದವು. ನಮ್ಮ ಬಿಜೆಪಿ ಸರಕಾರ ನಮ್ಮ ಚಿಕ್ಕಪೇಟೆ ಕ್ಷೇತ್ರಕ್ಕೆ ಅಗತ್ಯ ಅನುದಾನ ನೀಡಿತು. ಇದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಂಡೆವು. ಶೇ.65ರಷ್ಟು ಕಾಮಗಾರಿಗಳನ್ನು ಪೂರ್ಣಗೊಳಿಸಿದ್ದೇವೆ. ಉಳಿದ ಕೆಲಸಗಳನ್ನು ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ಹೃದಯ ಭಾಗದ ಕೇಂದ್ರೀಯ ವ್ಯಾಪಾರಿಗಳ ಹಬ್ ಆಗಿದೆ. ಈ ಕ್ಷೇತ್ರವನ್ನು ನಾವು ಎಷ್ಟು ಅಭಿವೃದ್ಧಿಪಡಿಸುತ್ತೇವೊ ಅಷ್ಟು ವ್ಯಾಪಾರವೂ ಉಜ್ವಲಗೊಳ್ಳುತ್ತದೆ. ಮುಖ್ಯಮಂತ್ರಿಗಳು ಮತ್ತು ಪಾಲಿಕೆ ಅಧಿಕಾರಿಗಳು ಇದಕ್ಕೆ ನೆರವು ನೀಡುವ ಭರವಸೆ ನೀಡಿದ್ದಾರೆ ಎಂದು ಉದಯ್ ಗರುಡಾಚಾರ್ ತಿಳಿಸಿದರು. ಸುಮಾರು 40 ವರ್ಷಗಳ ಹಿಂದೆ ಕ್ಷೇತ್ರದ ಬಡವರಿಗಾಗಿ ನಿರ್ಮಿಸಿದ್ದ ಮನೆಗಳು ಶಿಥಿಲಾವಸ್ಥೆಗೆ ತಲುಪಿ, ಎಲ್ಲವೂ ಬಿದ್ದು ಹೋಗಿದ್ದವು. ಇದೀಗ ನನ್ನ ಅಧಿಕಾರಾವಧಿಯಲ್ಲಿ ಕಲಾಸಿಪಾಳ್ಯದ ಮೋತಿ ನಗರದಲ್ಲಿ ನೂತನವಾಗಿ ಎಂ.ಎಸ್. ಬಿಲ್ಡಿಂಗ್‍ನ ಮನೆಗಳನ್ನು ಪುನರ್ ನಿರ್ಮಾಣ ಮಾಡಿಸಿದ್ದೇನೆ. ಇದನ್ನು ಮುಖ್ಯಮಂತ್ರಿಗಳಿಂದಲೇ ಲೋಕಾರ್ಪಣೆ ಮಾಡಿಸುವ ಆಶಯವಿದೆ. ಶೀಘ್ರದಲ್ಲೇ ಆ ಕಾರ್ಯಕ್ರಮವನ್ನೂ ಮಾಡಿಸಲಾಗುವುದು ಎಂದರು.
ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ,
ಪಾಲಿಕೆ ಮಾಜಿ ಸದಸ್ಯ ಪಿ. ಧನರಾಜ್ ಮಾತನಾಡಿದರು. ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ವಲಯ ಆಯುಕ್ತರಾದ ತುಳಸಿ, ನಿಕಟ ಪೂರ್ವ ಪಾಲಿಕೆ ಸದಸ್ಯೆ ಪ್ರತಿಭಾ ಧನರಾಜ್, ಜಂಟಿ ಆಯುಕ್ತ ಜಗದೀಶ್ ನಾಯಕ್, ಮುಖ್ಯ ಅಭಿಯಂತರ ರಾಜೀವ್, ಈಶ್ವರ್, ಕಾರ್ಯನಿರ್ವಾಹಕ ಎಂಜಿನಿಯರ್ ರೆಡ್ಡಿ, ಮಾಜಿ ಕಾರ್ಪೊರೇಟರ್ ಪಿ. ಧನರಾಜ್ ಮತ್ತಿತರರು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

