Breaking News

ತುರ್ತು ಸಭೆ ಕರೆದ ಆರೋಗ್ಯ ಸಚಿವ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕರುನಾಡಿನಲ್ಲಿ ಮತ್ತೆ ಲಾಕ್ ಡೌನ್ ಅಸ್ತ್ರ ಪ್ರಯೋಗಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ರಾಜ್ಯಾದ್ಯಂತ ಕೊರೊನಾ ಸೋಂಕು ಸ್ಫೋಟಗೊಳ್ಳುತ್ತಿರುವ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅಧಿಕಾರಿಗಳ ತುರ್ತು ಸಭೆ ಕರೆದಿದ್ದಾರೆ.

ರಾಜ್ಯದಲ್ಲಿ ನಿನ್ನೆ 11,698 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೇ 9221 ಕೇಸ್ ಪತ್ತೆಯಾಗಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಲಾಕ್ ಆಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.

Share News

About admin

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *