ಧಾರವಾಡ : ಎಲ್ಲ ಶಾಲೆಗಳಲ್ಲಿ ಸುಮಾರು 100 ಜನರನ್ನು ಕೋವಿಡ್ ತಪಾಸಣೆ ಮಾಡಬೇಕು. ಈ ಪೈಕಿ 5ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡು ಬಂದರೆ 5 ದಿನಗಳ ಕಾಲ ಶಾಲೆ ಮುಚ್ಚಬೇಕು . ಜಿಲ್ಲೆಯ ಶಾಲೆ – ಕಾಲೇಜುಗಳಲ್ಲಿ ಮಾಸ್ಕ್ ಧರಿಸದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡಬಾರದು ಎಂದು ಡಿಸಿ ನಿತೇಶ ಪಾಟೀಲ ಹೇಳಿದರು.
ನಗರದ ಡಿಸಿ ಕಚೇರಿ ನೂತನ ಸಭಾಂಗಣದಲ್ಲಿ ಕೋವಿಡ್ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕೋವಿಡ್‌ನ ರೂಪಾಂತರಗೊಂಡ ವೈರಾಣು ಹರಡುವಿಕೆಯಲ್ಲಿ ಕ್ರಮೇಣವಾಗಿ ಹೆಚ್ಚಳ ಕಂಡು ಬರುತ್ತಿದೆ. ಜಿಲ್ಲೆಯ ಸರ್ಕಾರಿ-ಖಾಸಗಿ ಆಸ್ಪತ್ರೆಗಳು ಚಿಕಿತ್ಸೆಗೆ ಸರ್ವಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಎಲ್ಲ ತಾಲೂಕು ಆಸ್ಪತ್ರೆಗಳನ್ನು ಸಿದ್ಧ ಮಾಡಿಕೊಳ್ಳಬೇಕು. ತಾಲೂಕು ಕೇಂದ್ರಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ಸ್ಥಾಪಿಸಲು ಸ್ಥಳ ಗುರುತಿಸಬೇಕು. ತುರ್ತು ಚಿಕಿತ್ಸಾವಾಹನ, ಔಷಧ ಮತ್ತಿತರೆ ಉಪಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಸಹಕಾರ ನೀಡಲಿದ್ದು, ಆಯುಷ್ ವೈದ್ಯರನ್ನು ಸೇವೆಗೆ ಬಳಸಿಕೊಳ್ಳಲಾಗುವುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

