Breaking News

ಮಣಿಪಾಲ್ ಆಸ್ಪತ್ರೆಗೆ ಸಿಎಂ ದಾಖಲು

ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ನಿನ್ನೆ ಮುಖ್ಯಮಂತ್ರಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರ ಮಗ ಮತ್ತು ಸೊಸೆಗೂ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಬೊಮ್ಮಾಯಿ ತೆರಳಿದ್ದಾರೆ ಎನ್ನಲಾಗಿದೆ.

Share News

About admin

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *