Breaking News

ಮಾಹಿತಿ ನೀಡದಿದ್ದರೂ ಸೈಬರ್ ವಂಚನೆ

ಹುಬ್ಬಳ್ಳಿ: ಬ್ಯಾಂಕ್ ಖಾತೆಯ ಯಾವುದೇ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳದಿದ್ದರೂ ವ್ಯಕ್ತಿಯೊಬ್ಬರ ಖಾತೆಯಿಂದ 97,500 ರೂ. ವರ್ಗಾವಣೆ ಮಾಡಿಕೊಂಡು ವಂಚಿಸಿರುವ ಕುರಿತು ಹು-ಧಾ ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಣ್ಣಿಗೇರಿ ತಾಲೂಕು ನಲವಡಿ ಗ್ರಾಮದ ನಾಗಪ್ಪ ನರಗುಂದ ವಂಚನೆಗೀಡಾದವರು. ತಾನು ಬ್ಯಾಂಕ್ ಖಾತೆ ಹಾಗೂ ಎಟಿಎಂ ಕಾರ್ಡ್‌ನ ಯಾವುದೇ ವಿವರವನ್ನು ಯಾರಿಗೂ ನೀಡಿರಲಿಲ್ಲ. ಯಾವುದೇ ನೆಟ್ ಬ್ಯಾಂಕಿಂಗ್ ಸೌಲಭ್ಯವನ್ನೂ ಹೊಂದಿಲ್ಲ. ಆದರೂ ತನ್ನ ಕೆನರಾ ಬ್ಯಾಂಕ್ ಖಾತೆಯಿಂದ ಡಿ. 30ರಿಂದ ಜ. 5ರವರೆಗೆ ಹಣ ಡ್ರಾ ಮಾಡಿಕೊಳ್ಳುವ ಮೂಲಕ ವಂಚಿಸಿದ್ದಾರೆ. ಎಂದು ದೂರಿನಲ್ಲಿ ತಿಳಿಸಿದ್ದಾರೆ. ಪೊಲೀಸರು ತನಿಖೆ ನಡೆಸಿದ್ದಾರೆ.

Share News

About admin

Check Also

ಉಸಿರುಗಟ್ಟಿಸಿ ಪತಿಯ ಹತ್ಯೆ; ಪತ್ನಿ ಸೇರಿ ಮೂವರ ಬಂಧನ

ಬೆಂಗಳೂರು: ಪಾರ್ಶ್ವವಾಯುವಿನಿಂದ ಹಾಸಿಗೆ ಹಿಡಿದಿದ್ದ ಪತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಬಿಂಬಿಸಿದ ಆರೋಪದಡಿ ಪತ್ನಿ ಸೇರಿದಂತೆ ಮೂವರನ್ನು …

Leave a Reply

Your email address will not be published. Required fields are marked *