ಪುತ್ತೂರು(ದಕ್ಷಿಣ ಕನ್ನಡ): ಇದು ವಿಪಕ್ಷ ನಾಯಕ ಸಿದ್ಧರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಕುರ್ಚಿ ಹೋರಾಟವಾಗಿದ್ದು, ಕಾಂಗ್ರೆಸ್ ರಾಜ್ಯದ ಜನತೆಯ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಪುತ್ತೂರು ಶಾಸಕ ಸಂಜೀವ ಮಠಂದೂರು ಆರೋಪಿಸಿದ್ದಾರೆ.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು,ಮೇಕೆದಾಟಿಗೂ ಈ ಪಾದಯಾತ್ರೆಗೂ ಯಾವುದೇ ಸಂಬಂಧವಿಲ್ಲ ಎಂದರು. ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಸಮಯದಲ್ಲಿ ಕಾಂಗ್ರೆಸ್ ಪಾದಯಾತ್ರೆ ಮಾಡುವ ಮೂಲಕ ಮತ್ತಷ್ಟು ಕೊರೊನಾ ಹರಡುವ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

