ರಾಮನಗರ: ಒಂದು ವೇಳೆ ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಲು ಸೂಚಿಸಿದರೆ, ನಾವು ಕೋರ್ಟ್ ಗೆ ತಲೆ ಬಾಗುತ್ತೇವೆ. ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಯಾವಾಗಲೂ ಕಾನೂನನ್ನು ಗೌರವಿಸುತ್ತದೆ. ಆದರೆ, ಬಿಜೆಪಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದು, ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ. ಬಿಜೆಪಿ ನಾಯಕರಿಂದಲೇ ಕೋವಿಡ್ ನಿಯಮ ಉಲ್ಲಂಘನೆಯಾಗುತ್ತಿದೆ. ಕಾನೂನು ಎತ್ತಿ ಹಿಡಿಯಬೇಕಿದ್ದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿಯೇ ಜಾತ್ರೆ ನಡೆದಿದೆ. ನಾವು ಕೋವಿಡ್ ನಿಯಮಗಳನ್ನು ಪಾಲಿಸಿಯೇ ಪಾದಯಾತ್ರೆ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

