ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಪಾದಯಾತ್ರೆಯ ವಾಹನ ಸಂಚಾರ,ಜನಸಂಚಾರ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

