Breaking News

ಅವಳಿ ನಗರದಲ್ಲಿ 1 ರಿಂದ 8ನೇ ತರಗತಿಗಳು ಬಂದ್


ಧಾರವಾಡ : ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿ, ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು (ಜ.12) ಆದೇಶ ಹೊರಡಿಸಿದ್ದಾರೆ.

ಆದೇಶದಲ್ಲಿ ತಿಳಿಸಿರುವಂತೆ, ರಾಜ್ಯದಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ವಿಪತ್ತು ನಿರ್ವಹಣಾ ಕಾರ್ಯಕಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಮುಖ್ಯ ಕಾರ್ಯದರ್ಶಿಗಳು ಹಲವಾರು ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.

Share News

About admin

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *