Breaking News

ಯುವತಿಗೆ ಅಶ್ಲೀಲ ವಿಡಿಯೋ ಸೇಂಡ್ : ವ್ಯಕ್ತಿ ವಿರುದ್ಧ ದೂರು ದಾಖಲು

ಹುಬ್ಬಳ್ಳಿ: ಯುವತಿಗೆ ಅಶ್ಲೀಲ ಫೋಟೋ, ವಿಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ವಿರುದ್ಧ ಸೈಬರ್ ಕ್ರೈಂ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ದೂರು ನೀಡಿರುವ ಯುವತಿ ಇನ್​​ಸ್ಟಾಗ್ರಾಮ್​ನಲ್ಲಿ ಎರಡು ವರ್ಷಗಳಿಂದ ಖಾತೆ ಓಪನ್ ಮಾಡಿದ್ದು, ಯುವತಿಗೆ ಸೋನು ನವೀನ್​ ಹೆಸರಿನ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿತ್ತು. ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿದ ಬಳಿಕ ಯುವತಿಯ ಇನ್​​ಸ್ಟಾಗ್ರಾಮ್​ನಲ್ಲಿದ್ದ ಫೋಟೋಗಳನ್ನು ತೆಗೆದುಕೊಂಡು ಅಶ್ಲೀಲವಾಗಿ ಎಡಿಟ್ ಮಾಡಿ, ಅವುಗಳನ್ನು ಫೇಸ್​ಬುಕ್, ಇನ್​​ಸ್ಟಾಗ್ರಾಮ್​ನಲ್ಲಿ ಅಪ್ಲೋಡ್​ ಮಾಡುತ್ತೇನೆಂದು ಹೆದರಿಸಿದ್ದಾನೆ ಎನ್ನಲಾಗಿದೆ.ಅಷ್ಟೇ ಅಲ್ಲದೆ, ಬೇರೆ ಮಹಿಳೆಯರ ನಗ್ನ ವಿಡಿಯೋ, ಫೋಟೋಗಳನ್ನು ಕಳುಹಿಸಿ ಬೆದರಿಕೆ ಹಾಕಿದ್ದು, ಕೂಡಲೇ ಆತನನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಯುವತಿ ದೂರಿನಲ್ಲಿ ಮನವಿ ಮಾಡಿದ್ದಾಳೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *