Breaking News

ಮೀಟೂ ಪ್ರಕರಣ : ಅರ್ಜುನ್​ ಸರ್ಜಾಗೆ ಜಯ


ತಮ್ಮ ಜತೆ ಅರ್ಜುನ್​ ಸರ್ಜಾಅವರು ಅಸಭ್ಯವಾಗಿ ನಡೆದುಕೊಂಡಿದ್ದಾರೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಶ್ರುತಿ ಹರಿಹರನ್​ ಆರೋಪಿಸಿದ್ದರು. ಆ ಸಂಬಂಧ ಕಬ್ಬನ್​ ಪಾರ್ಕ್​ ಪೊಲೀಸ್​ ಠಾಣೆಯಲ್ಲಿ ಕೇಸ್​ ದಾಖಲಾಗಿತ್ತು.

2018ರಲ್ಲಿ ಭಾರಿ ಸದ್ದು ಮಾಡಿದ್ದ ಮೀಟೂ ಆಂದೋಲನದಲ್ಲಿ ಅರ್ಜುನ್​ ಸರ್ಜಾ ಮೇಲೆ ನಟಿ ಶ್ರುತಿ ಹರಿಹರನ್​  ಅವರು ಕೆಲವು ಗಂಭೀರ ಆರೋಪಗಳನ್ನು ಹೊರಿಸಿದ್ದರು.  ಮೂರು ವರ್ಷ ತನಿಖೆ ನಡೆಸಿದರೂ ಕೂಡ ಪೊಲೀಸರಿಗೆ ಸೂಕ್ತ ಸಾಕ್ಷಿಗಳು ಸಿಕ್ಕಿಲ್ಲ.

ಹಾಗಾಗಿ ಪೊಲೀಸರು ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದರು. ಈ ವರದಿಗೆ ಶ್ರುತಿ ಹರಿಹರನ್​ ಆಕ್ಷೇಪಣೆ ಸಲ್ಲಿಸಿಲ್ಲ. ಈ ಕಾರಣಕ್ಕೆ 8ನೇ ಎಸಿಎಂಎಂ ನ್ಯಾಯಾಲಯ ವರದಿಯನ್ನು ಅಂಗೀಕರಿಸಿದೆ. ಹೀಗಾಗಿ, ಪ್ರಕರಣದಲ್ಲಿ ಅರ್ಜುನ್​ ಸರ್ಜಾಗೆ ಗೆಲುವಾಗಿದೆ.

ಪ್ರಕರಣವೊಂದರ ತನಿಖೆ ಸಮಯದಲ್ಲಿ ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಲು ಅಗತ್ಯ ಇರುವಷ್ಟು ಸಾಕ್ಷ್ಯಾಧಾರಗಳು ಸಿಗಲಿಲ್ಲ ಎಂದು ವಿಚಾರಣಾ ನ್ಯಾಯಾಲಯಕ್ಕೆ ಪೊಲೀಸರು ಸಲ್ಲಿಸುವ ಅಂತಿಮ ವರದಿಯೇ ಬಿ ರಿಪೋರ್ಟ್‌. ಈಗ ನ್ಯಾಯಾಲಯ ಈ ವರದಿಯನ್ನು ಒಪ್ಪಿರುವುದರಿಂದ ಪ್ರಕರಣದಲ್ಲಿ ಅರ್ಜುನ್​ ಸರ್ಜಾ ಯಾವುದೇ ತಪ್ಪು ಮಾಡಿಲ್ಲ ಎಂಬುದು ಸಾಬೀತಾದಂತಾಗಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *