ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತವಾದ ಹಿನ್ನಲೆ ಈ ಘಟನೆ ನಡೆದಿದೆ.
ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ ಪೊಲೀಸರು ಬಾಲಕಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ಗೆ ರವಾನೆ ಮಾಡಿದ್ದು, ಟಿಪ್ಪರ್ ಲಾರಿ ಚಾಲಕನನ್ನು ಕೆ.ಎಸ್.ಲೇಔಟ್ ಸಂಚಾರಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ಕುರಿತಂತೆ ಕುಮಾರಸ್ವಾಮಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

