ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ತನ್ನ ಪ್ರೀತಿಯ ಮಗಳನ್ನು ಕಳೆದುಕೊಂಡ ತಂದೆ ರೂಪೇಶ್ ಕಿಮ್ಸ್ ಆಸ್ಪತ್ರೆಯಲ್ಲಿ ಬಿಕ್ಕಿ – ಬಿಕ್ಕಿ ಅಳುತ್ತಿದ್ದಾರೆ.
ನನ್ನನ್ನು ಕ್ಷಮಿಸು ಮಗಳೇ ನಿನ್ನನ್ನು ಉಳಿಸಿಕೊಳ್ಳಲು ಆಗಲಿಲ್ಲ, ಎಂದು ಗಳಗಳನೇ ಕಣ್ಣೀರು ಹಾಕಿದ್ದಾರೆ. ಅಲ್ಲದೇ ತಡರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಮಗಳನ್ನು ಕಳೆದುಕೊಂಡು ತಂದೆ ರೂಪೇಶ್ ತಮ್ಮ ದುಖಃವನ್ನು ತೋಡಿಕೊಂಡಿದ್ದಾರೆ. ಇನ್ನೂ ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

