Breaking News

ಗ್ರಾ.ಪಂ ಸಭೆಯಲ್ಲಿ ಮಾತಿನ ಚಕಮಕಿ : ಕೈ ಕೈ ಮಿಲಾಯಿಸಿಕೊಂಡು ಆಸ್ಪತ್ರೆಗೆ ದಾಖಲು

ತೀರ್ಥಹಳ್ಳಿ: ಇಂದು ಬೆಳಗ್ಗೆ ಸಾಮಾನ್ಯ ಸಭೆ ನಡೆಯುತ್ತಿದ್ದ ವೇಳೆ ಇಬ್ಬರು ಗ್ರಾಮ ಪಂಚಾಯತ್ ಸದಸ್ಯರು ಹೊಡೆದಾಡಿಕೊಂಡು ಆಸ್ಪತ್ರೆ ಸೇರಿರುವ ಘಟನೆ ತಾಲ್ಲೂಕಿನ ಕೋಣಂದೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕೊಣಂದೂರಿನಲ್ಲಿ ನಡೆದಿದೆ.

ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯ ಸುರೇಶ್ ಮತ್ತು ಬಿಜೆಪಿ ಬೆಂಬಲಿತ ಸದಸ್ಯ ಪೂರ್ಣೇಶ್ ಇಬ್ಬರ ನಡುವೆ ಕೆರೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಾತಿನ ಚಕಮಕಿ ನಡೆದು ಇಬ್ಬರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.

ಘಟನೆಯಲ್ಲಿ ಸುರೇಶ್ ಅವರಿಗೆ ಗಂಭೀರ ಗಾಯವಾಗಿದ್ದು, ತೀರ್ಥಹಳ್ಳಿ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಪೂರ್ಣೇಶ್ ಅವರು ಕೋಣಂದೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ .

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *