Breaking News

ಕೊರೋನಾ ಮಧ್ಯೆ ಹುಬ್ಬಳ್ಳಿಯಲ್ಲಿ ಸಂಕ್ರಾಂತಿ ಹಬ್ಬದ ವ್ಯಾಪಾರ


ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ
ಸಂಕ್ರಾಂತಿ ಹಬ್ಬ ಕಳೆಗಟ್ಟಿದ್ದು, ಮಾರುಕಟ್ಟೆಯಲ್ಲಿ ವಹಿವಾಟು ಕೂಡ ಹೆಚ್ಚಾಗಿದೆ. ಹೆಚ್ಚಿನ ಜನರು ಅಗತ್ಯ ವಸ್ತುಗಳನ್ನು ಕೊಳ್ಳಲು ಮಾರುಕಟ್ಟೆಯಲ್ಲಿ ಮುಗಿ ಬೀಳುತ್ತಿದ್ದಾರೆ.

ಸಂಕ್ರಾಂತಿ ಹಬ್ಬಕ್ಕೆ ಅಗತ್ಯವಾಗಿರುವ ಅವರೆಕಾಯಿ, ಗೆಣಸು, ಕಡಲೇಕಾಯಿ, ಕಬ್ಬು, ಎಳ್ಳು-ಬೆಲ್ಲಗಳ ಮಿಶ್ರಣ, ಸಕ್ಕರೆ ಅಚ್ಚು, ಸೇರಿದಂತೆ ನಾನಾ ವಸ್ತುಗಳ ಬೆಲೆಯಲ್ಲಿ ಸ್ವಲ್ಪಮಟ್ಟಿಗೆ ವ್ಯತ್ಯಾಸವಾಗಿದ್ದು, ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿ ನಡೆಯಿತು. ಕಡಲೆಬೀಜ, ಕೊಬ್ಬರಿ, ಎಳ್ಳು ಇತ್ಯಾದಿಗಳ ದರದಲ್ಲಿ ಏರಿಕೆ ಕಂಡಿದೆ. ಜನತಾ ಬಜಾರ್ ಸೇರಿದಂತೆ ವಿವಿಧ ಮಾರುಕಟ್ಟೆಗಳು, ಹಲವು ಪ್ರಮುಖ ರಸ್ತೆಗಳು ಗ್ರಾಹಕರಿಂದ ತುಂಬಿ ತುಳುಕುತ್ತಿವೆ.

ಬಿಳಿಯ ಕಬ್ಬು, ಮಾವಿನಸೊಪ್ಪಿನ ಮಾರಾಟ ಭರ್ಜರಿಯಾಗಿದೆ. ಎಳ್ಳು ಬೀರುವ ಮಣ್ಣಿನ ಕುಡಿಕೆಗಳು ಸೇರಿದಂತೆ ನಾನಾ ವಿನ್ಯಾಸದ ಬಾಕ್ಸ್‌ಗಳು ಮಾರುಕಟ್ಟೆಯಲ್ಲಿ ಗಮನ ಸೆಳೆಯುತ್ತಿವೆ. ಸಿದ್ಧ ಎಳ್ಳು-ಬೆಲ್ಲ ಮಿಶ್ರಣ, ಬಣ್ಣ ಬಣ್ಣದ ಸಕ್ಕರೆ ಅಚ್ಚು ಭರ್ಜರಿ ಮಾರಾಟವಾಗುತ್ತಿವೆ. ತಾವರೆ ಒಂದಕ್ಕೆ .30, ಗರಿಕೆ, ಬಿಳಿ ಎಕ್ಕ 10 ರು., ಮರಗ ಹಾಗೂ ವನ 30 ರು., ತುಳಸಿ ಮಾಲೆ ನಾಟಿ 30 ರು. ರಿಂದ 60, ಮಾವಿನ ಸೊಪ್ಪು 20 ರು., ಬೇವು ಕಟ್ಟು 10-20 ರು. ಬೆಲೆ ಇದೆ.

Share News

About admin

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *