ಬೆಂಗಳೂರು: ನೈಸ್ ರಸ್ತೆಯಲ್ಲಿ ಇತ್ತೀಚೆಗೆ ಅಪಘಾತಗಳು ಸಂಭವಿಸುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವಿಗೀಡಾಗುತ್ತಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರವನ್ನು ರಾಜಧಾನಿ ಹೊರ ವಲಯದ ನೈಸ್ ರಸ್ತೆಯಲ್ಲಿ ರಾತ್ರಿ ವೇಳೆ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಿ ಬೆಂಗಳೂರು ಸಂಚಾರ ಪೊಲೀಸರು ಆದೇಶಿಸಿದ್ದಾರೆ.
ಜ. 16 ರಿಂದ ಜಾರಿಗೆ ಬರುವಂತೆ ನೈಸ್ ರಸ್ತೆಯಲ್ಲಿ ರಾತ್ರಿ ಹತ್ತು ಗಂಟೆಯಿಂದ ಬೆಳಗ್ಗೆ ಐದು ಗಂಟೆ ವರೆಗೆ ಯಾವುದೇ ದ್ವಿಚಕ್ರ ವಾಹನ ಸಂಚಾರ ಮಾಡುವಂತಿಲ್ಲ. ಈ ಕುರಿತು ನಂದಿ ಇನ್‌ಫ್ರಾಸ್ಟ್ರಕ್ಷರ್ ಕಾರಿಡಾರ್ ಎಂಟರ್‌ಪ್ರೈಸಸ್ ಲಿ.(NICE) ಅಧಿಕೃತ ಪ್ರಕಟಣೆ ನೀಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

