Breaking News

ಪಂಚಭೂತದಲ್ಲಿ ಲೀನವಾದ ಗೊಂಬೆ ಸಮನ್ವಿ

ಬೆಂಗಳೂರು : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನಳಾಗಿದ್ದಾಳೆ. ರಿಷಿ ಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ. ಕುಟುಂಬದವರು, ಕಿರುತೆರೆ ಸೆಲೆಬ್ರಿಟಿಗಳು ಇದರಲ್ಲಿ ಭಾಗಿಯಾಗಿದ್ದರು. ಈ ವೇಳೆ ಕುಟುಂಬದವರು ಹಾಗೂ ಸೆಲೆಬ್ರಿಟಿಗಳ ಆಕ್ರಂದನ ಮುಗಿಲುಮುಟ್ಟಿದೆ.

Share News

About admin

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *