ವೇಗವಾಗಿ ಹರಡುತ್ತಿದೆ ಓಮಿಕ್ರಾನ್ ತಳಿ

ಬೆಂಗಳೂರು: ಓಮಿಕ್ರಾನ್ ತಳಿಯ ಕೊರೊನಾ ವೈರಾಣು ಗಂಭೀರ ಸಮಸ್ಯೆ ಉಂಟುಮಾಡದೇ ಇದ್ದರೂ ಕ್ಷಿಪ್ರಗತಿಯಲ್ಲಿ ಹೆಚ್ಚು ಜನರಿಗೆ ಹರಡಲಿದೆ. ಮೊದಲನೇ ಅಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದುಪ್ಪಟ್ಟಾಗಲು 10-12 ದಿನಗಳು ತಗುಲಿದ್ದವು. ಎರಡನೇ ಅಲೆಯಲ್ಲಿ 8 ದಿನಗಳು ತಗುಲಿದ್ದವು. ಆದರೆ ಈ ಬಾರಿ ಎದುರಾಗಿರುವ ಮೂರನೇ ಅಲೆಯಲ್ಲಿ 2 ದಿನಗಳಲ್ಲೇ ಕೊರೊನಾ ಪ್ರಕರಣಗಳು ದುಪ್ಪಟ್ಟಾಗುತ್ತಿವೆ  ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.

ಈ ಹಿಂದಿನ ಎರಡು ಕೊರೊನಾ ಅಲೆಗಳಿಗೆ ಹೋಲಿಸಿದರೆ ಈ ಬಾರಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಜನರು ಕೊರೊನಾ ಸೋಂಕಿಗೆ ತುತ್ತಾಗುತ್ತಿರುವುದು ಗಮನಕ್ಕೆ ಬಂದಿದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page