Breaking News

ಸಿಎಂಗೆ ಎಚ್ಚರಿಕೆ ಕೊಟ್ಟ ಹೆಚ್.ಡಿ.ರೇವಣ್ಣ


ಹಾಸನ: ರಾಜ್ಯ ಬಿಜೆಪಿ ಸರ್ಕಾರ ಶಿಕ್ಷಣ ಇಲಾಖೆಯಲ್ಲಿಯೂ ರಾಜಕೀಯ ಮಾಡುತ್ತಿದೆ. ಸರ್ಕಾರದ ತಾರತಮ್ಯ ನೀತಿ ವಿರುದ್ಧ ಸಿಎಂ ಬಸವರಾಜ್ ಬೊಮ್ಮಾಯಿ ಮನೆ ಮುಂದೆ ಧರಣಿ ಮಾಡುತ್ತೇನೆ. ಹೊಳೆನರಸಿಪುರ ಮಹಿಳಾ ಕಾಲೇಜಿಗೆ ಎಂಎಸ್ ಸಿ ಪದವಿ ಮಂಜೂರು ಮಾಡಲು ರಾಜ್ಯ ಸರ್ಕಾರ ಮಿನಾಮೇಷ ಎಣಿಸುತ್ತಿದೆ ಎಂದು ಜೆಡಿಎಸ್ ಮುಖಂಡ, ಶಾಸಕ ಹೆಚ್.ಡಿ.ರೇವಣ್ಣ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಶಿಕ್ಷಣ ಇಲಾಖೆ ಕಾರ್ಯದರ್ಶಿ ಒಪ್ಪಿಗೆ ನೀಡಿದ್ದಾರೆ. ಮೈಸೂರು ವಿವಿಯವರು ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆದರೆ ಕಾಲೇಜಿನಲ್ಲಿ ಕೋರ್ಸ್ ಆರಂಭಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಮಾತ್ರ ನಿರಾಕರಿಸುತ್ತಿದ್ದಾರೆ. ಸರ್ಕಾರದ ಈ ಧೋರಣೆ ಖಂಡಿಸಿ ಸಿಎಂ ಮನೆ ಮುಂದೆ ಮಂಗಳವಾರದಿಂದ ಧರಣಿ ನಡೆಸುತ್ತೇನೆ ಎಂದು ಗುಡುಗಿದ್ದಾರೆ.

Share News

About admin

Check Also

ಬೆಳಗಾವಿಯಲ್ಲಿ ‘ಕರ್ನಾಟಕ ಬಂದ್’ಗೆ ಅಭೂತಪೂರ್ವ ಬೆಂಬಲ : ಧಾರವಾಡದಲ್ಲಿ ನಿಷೇಧಾಜ್ಞೆ ಜಾರಿ

ಬೆಳಗಾವಿ/ಧಾರವಾಡ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಉತ್ತರ ಕರ್ನಾಟಕದಾದ್ಯಂತ ವ್ಯಾಪಕ ಬೆಂಬಲ …

Leave a Reply

Your email address will not be published. Required fields are marked *