ಬೆಂಗಳೂರು: ಇಂದು ಬೆಳಗ್ಗೆ ಪತಿ ನರಸಿಂಹಮೂರ್ತಿ ಕೆಲಸಕ್ಕೆಂದು ಹೊರಗೆ ಹೋಗಿದ್ದಾಗ ಮಗುವನ್ನು ಕರೆದುಕೊಂಡು ತಾಯಿ ಸ್ನಾನಕ್ಕೆಂದು ಬಚ್ಚಲಕೋಣೆಗೆ ಹೋಗಿ ಬಿಸಿನೀರಿಗಾಗಿ ಗ್ಯಾಸ್ ಗೀಸರ್ ಆನ್ ಮಾಡಲು ಹೋಗಿದ್ದ ಸಂದರ್ಭದಲ್ಲಿ ಗ್ಯಾಸ್ ಗೀಸರ್ನಿಂದ ಅನಿಲ ಸೋರಿಕೆ ಉಂಟಾಗಿದ್ದು, ಉಸಿರುಗಟ್ಟಿ ತಾಯಿ-ಮಗಳು ಇಬ್ಬರೂ ಸಾವಿಗೀಡಾಗಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಚಿಕ್ಕಬಾಣಾವರದಲ್ಲಿ ಸಂಭವಿಸಿದೆ. ತಾಯಿ – ಮಗಳು ಉಸಿರಾಡಲು ತೊಂದರೆ ಉಂಟಾಗಿರುವ ಸನ್ನಿವೇಶ ಸಂಭವಿಸಿರುವುದು ನಗರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
35 ವರ್ಷದ ತಾಯಿ ಮಂಗಳ 7 ವರ್ಷದ ಗೌತಮಿ ಮೃತ ವ್ಯಕ್ತಿಗಳು ಎಂದು ತಿಳಿದು ಬಂದಿದೆ. ರಾಮನಗರ ಮೂಲದ ಈ ಕುಟುಂಬ 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ನೆಲೆಸಿತ್ತು. ಮನೆ ಮಾಲೀಕರು ಮನೆ ಬಳಿ ಬಂದು ನೋಡಿದಗ ಈ ಘಟನೆ ಬೆಳಕಿಗೆ ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

