Breaking News

ಮಹಾನಗರ ಪಾಲಿಕೆಗೆ ಎಚ್ಚರಿಕೆ ಕೊಟ್ಟ ಹಿಂದೂ ಪರಿಷತ್


ಹುಬ್ಬಳ್ಳಿ : ಮಹಾನಗರ ಪಾಲಿಕೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಮರುಪ್ರತಿಷ್ಠಾಪನೆ ಮಾಡದಿದ್ದಲ್ಲಿ ಫೆ.19 ರಂದು ಮಹಾನಗರ ಪಾಲಿಕೆಗೆ ಮುತ್ತಿಗೆ ಹಾಕಿ ಬೀಗ ಹಾಕಲಾಗುವುದು ಎಂದು ಹಿಂದೂ ಪರಿಷತ್ದ್ ರಾಜ್ಯ ಪ್ರಮುಖರಾದ ಗಣೇಶ ಕದಂ ಎಚ್ಚರಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹು-ಧಾ ಪಾಲಿಕೆಯಲ್ಲಿ ಶಿವಾಜಿ ಮಹಾರಾಜರ ಮೂರ್ತಿಯು ಕಳಪೆ ಗುಣಮಟ್ಟದಿಂದ ಕೂಡಿದ ಹಿನ್ನಲೆಯಲ್ಲಿ ಕೆಲವೇ ದಿನಗಳಲ್ಲಿ ಅದು ಶಿಥಿಲಗೊಂಡಿತ್ತು. ಆದರೆ ಮರು ಮೂರ್ತಿ ಪ್ರತಿಷ್ಠಾಪನೆಗೆ ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಹಲವಾರು ಭಾರಿ ಮನವಿ ಸಲ್ಲಿಸಿದರೂ ಕೂಡ ಯಾವುದೇ ಪ್ರಯೋಜನವಾಗಲಿಲ್ಲ. ಹಾಗೆಯೇ ಮೂರ್ತಿ ಪ್ರತಿಷ್ಠಾಪನೆಗೆ ಗಡವು ನೀಡಿದರು ಸಹ ನಿರ್ಲಕ್ಷ್ಯವಹಿಸಿದ್ದು ಖಂಡನೀಯ ಎಂದರು.

ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಪ್ರತಿಷ್ಠಾಪಿಸದಿದ್ದಲ್ಲಿ ಫೆ.19 ರಂದು ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದ ಅವರು ಅಧಿಕಾರಿಗಳಿಗೆ ಇದು ಕೊನೆಯ ಎಚ್ಚರಿಕೆ ಆಗಿದ್ದು, ಇದ್ದಕ್ಕೂ ಸ್ಪಂದಿಸದಿದ್ದರೆ ಪಾಲಿಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹೊಣೆಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಧಾರವಾಡ ಜಿಲ್ಲಾ ಅಧ್ಯಕ್ಷರಾದ ರಾಘವೇಂದ್ರ ಕಟಾರೆ, ಹುಬ್ಬಳ್ಳಿ ನಗರ ಅಧ್ಯಕ್ಷ ಸಿದ್ದು ರಾಯನಾಳ್, ಮಹಿಳಾ ಘಟಕದ ಅಧ್ಯಕ್ಷರಾದ ಲತಾ ಸಾವಂತ, ಮಹಿಳಾ ಪ್ರಧಾನ ಕಾರ್ಯದರ್ಶಿ ನೀತು ಪವಾರ್ ಇದ್ದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *