ಚಿತ್ರದುರ್ಗ: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಹೇಳಿದರು.
ಮೊಳಕಾಲ್ಮೂರು ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಖುದ್ದು ಮುಖ್ಯಮಂತ್ರಿಗಳು ಎಲ್ಲಾ ಜಿಲ್ಲಾಧಿಕಾರಿಗಳ ಜೊತೆ ಸಂಪರ್ಕದಲ್ಲಿದ್ದು, ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ .
ನಮ್ಮ ಜಿಲ್ಲೆಯಲ್ಲೂ ಸಹ, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಈಗಾಗಲೇ, 755 ಕ್ಕೂ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ, ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳುಲು ಸೂಚನೆ ನೀಡಿದ್ದೇನೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

