ಬೆಂಗಳೂರು: ಜನವರಿ 25ರ ನಂತ್ರ ರಾಜ್ಯದಲ್ಲಿ ಕೊರೋನಾ ಪೀಕ್ ಗೆ ತಲುಪಲಿದೆ ಎಂದು ತಜ್ಞರು ತಿಳಿಸಿದ್ದಾರೆ. ವೀಕೆಂಡ್ ಕರ್ಪ್ಯೂ ಅಂತ್ಯ, ಮುಂದುವರಿಕೆ ಬಗ್ಗೆ ಶುಕ್ರವಾರ ಮತ್ತೆ ಸಭೆ ಕರೆಯಲಾಗುತ್ತದೆ. ಆ ಸಭೆಯಲ್ಲಿ ವೀಕೆಂಡ್ ಕರ್ಪ್ಯೂ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ.
ಅಲ್ಲಿಯವರೆಗೆ ರಾಜ್ಯದಲ್ಲಿ ವೀಕೆಂಡ್ ಹಾಗೂ ನೈಟ್ ಕರ್ಪ್ಯೂ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಇಲ್ಲ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ಸ್ಪಷ್ಟ ಪಡಿಸಿದರು.
ಈ ಕುರಿತಂತೆ ಸಿಎಂ ನೇತೃತ್ವದ ಸಭೆಯ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದಂತ ಅವರು, ಇಂದಿನ ಸಭೆಯಲ್ಲಿ ತಜ್ಞರು ಸೇರಿದಂತೆ ಅನೇಕ ಅಧಿಕಾರಿಗಳು ಎಲ್ಲಾ ಭಾಗವಹಿಸಿದ್ದರು. ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಕೋವಿಡ್ ಪರೀಕ್ಷೆಯನ್ನು ಕೂಡ ಹೆಚ್ಚಿನದಾಗಿ ಮಾಡಲಾಗುತ್ತಿದೆ. ಅಷ್ಟು ಪರೀಕ್ಷೆ ಮಾಡುವ ಅವಶ್ಯಕತೆ ಇಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಲಸಿಕಾಕರಣವು ಐದಾರು ಜಿಲ್ಲೆಗಳಲ್ಲಿ ಕಡಿಮೆ ಆಗಿದೆ. ಆ ಜಿಲ್ಲೆಗಳ ಡಿಸಿಗಳ ಜೊತೆಗೆ ಲಸಿಕಾಕರಣ ಹೆಚ್ಚು ಮಾಡೋದಕ್ಕೆ ಸೂಚಿಸಲಾಗಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

