ಚೆನ್ನೈ: ಬರೋಬ್ಬರಿ 18 ವರ್ಷಗಳ ಅವರ ವಿವಾಹದ ಪಯಣಕ್ಕೆ ನಟ ಧನುಷ್ ವಿದಾಯ ಹೇಳಿದ್ದಾರೆ. ಈ ಮೂಲಕ ರಜನಿಕಾಂತ್ ಅವರ ಪುತ್ರಿಯಾದ ಐಶ್ವರ್ಯ ಅವರಿಂದ ಪ್ರತ್ಯೇಕಗೊಂಡಿದ್ದಾರೆ.
ಈ ಸಂಬಂಧ ಟ್ವಿಟರ್ನಲ್ಲಿ ಸ್ನೇಹಿತರು, ದಂಪತಿಗಳು, ಪೋಷಕರಾಗಿ ಮತ್ತು ಪರಸ್ಪರ ಹಿತೈಷಿಗಳಾಗಿ 18 ವರ್ಷಗಳ ಕಾಲ ಜೀವನ ಮಾಡಿದೆವು. ಈ ಪ್ರಯಾಣವು ಬೆಳವಣಿಗೆ, ತಿಳುವಳಿಕೆ, ಹೊಂದಾಣಿಕೆ ಮತ್ತು ಹೊಂದಿಕೊಳ್ಳುವಿಕೆಯಿಂದ ಕೂಡಿದೆ ಎಂದು ಬರೆದಿದ್ದಾರೆ.ಇಂದು ನಾವು ನಮ್ಮ ಮಾರ್ಗಗಳು ಪ್ರತ್ಯೇಕಗೊಳ್ಳುವ ಸ್ಥಳದಲ್ಲಿ ನಿಂತಿದ್ದೇವೆ. ಐಶ್ವರ್ಯ ಮತ್ತು ನಾನು ದಂಪತಿಗಳಾಗಿ ಬೇರೆಯಾಗಲು ನಿರ್ಧರಿಸಿದ್ದೇವೆ ಎಂದಿರುವ ಅವರು, ದಯವಿಟ್ಟು ನಮ್ಮ ನಿರ್ಧಾರವನ್ನು ಗೌರವಿಸಿ ಮತ್ತು ಇದನ್ನು ನಿಭಾಯಿಸಲು ನಮಗೆ ಗೌಪ್ಯತೆಯನ್ನು ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

