Breaking News

ವಿವಾದಾತ್ಮಕ ವಿಡಿಯೋ ವೈರೆಲ್ : ರಿಷಿ ಕುಮಾರ್ ಸ್ವಾಮೀಜಿ ಅರೆಸ್ಟ್


ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ  ಕೆಡವುವಂತೆ ಕಾಳಿ ಸ್ವಾಮೀಜಿ ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಇಂದು ಬೆಳಿಗನ ಜಾವ 4-30ಕ್ಕೆ ಚಿಕ್ಕಮಗಳೂರು ಮಠದಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ರಿಷಿ ಕುಮಾರ್ ಸ್ವಾಮೀಜಿಯನ್ನು ಪೊಲೀಸರು ಶ್ರೀರಂಗಪಟ್ಟಣ ಪೋಲಿಸ್ ಠಾಣೆಗೆ ಕರೆದುಕೊಂಡು ಹೋಗ್ತಿದ್ದಾರೆ.

ಹಿಂದೂಗಳು ಅತಿ ಬೇಗ ಜಾಗೃತರಾಗಿ ಹೊಡೆಯಬೇಕಾದ ಮಸೀದಿಯಲ್ಲಿ ಇದೂ ಒಂದು ಎಂದು ವಿಡಿಯೋ ಮಾಡಿದ್ದರು.ಸಮಾಜದಲ್ಲಿ ಕೋಮು ಸೌಹಾರ್ದತೆ ಹಾನಿ ಆಗುವ ನಿಟ್ಟಿನಲ್ಲಿ ಚಿಕ್ಕಮಗಳೂರು ಪೊಲೀಸರು ಸ್ವಾಮೀಜಿಯನ್ನು ವಶಕ್ಕೆ ಪಡೆದಿದ್ದಾರೆ.

ನಿನ್ನೆ ರಿಷಿ ಕುಮಾರ್ ಸ್ವಾಮೀಜಿ ಮಸೀದಿ ಮುಂದೆ ನಿಂತು ವಿಡಿಯೋ ಮಾಡಿ ಹಿಂದೂಗಳಿಗೆ ಕರೆ ನೀಡಿದ್ದರು. ಶ್ರೀರಂಗಪಟ್ಟಣದ ದೇವಾಲಯವನ್ನು ಕೆಡವಿ ಮಸೀದಿ ಮಾಡಿದ್ದಾರೆ. ಇದು ಮೊದಲು ದೇವಾಲಯವಿತ್ತು. ಇದನ್ನು ಕೆಡವಿದ್ದಾರೆ ಅಂತಾ ಆರೋಪಿಸಿ, ಇದನ್ನು ಆದಷ್ಟು ಬೇಗ ಬಾಬ್ರಿ ಮಸೀದಿ ರೀತಿಯಲ್ಲಿ ಕೆಡವಬೇಕೆಂದು ರಿಷಿ ಕುಮಾರ್ ಸ್ವಾಮೀಜಿ  ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದರು.

Share News

About admin

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *