Breaking News

ಬಂಜಾರಾ ಆಸ್ಪತ್ರೆಗೆ ಭೇಟಿ : ಚಿಕಿತ್ಸೆ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿ

ವಿಜಯಪುರ: ಬಂಜಾರಾ ಆಸ್ಪತ್ರೆಯಲ್ಲಿ ಕೋವಿಡ್‌ನಿಂದ ಮಹಿಳೆಯೊಬ್ಬರು ಇತ್ತೀಚೆಗೆ ಸಾವಿಗೀಡಾದ ಹಿನ್ನೆಲೆಯಲ್ಲಿ ಭೇಟಿ ನೀಡಿದ ಡಿಸಿ ಮತ್ತು ತಜ್ಞರು, ವಾರ್ಡ್‍ಗಳ ಐಸಿಯು ಬೆಡ್‍ಗಳನ್ನು ಪರಿಶೀಲಿಸಿ  ಜಿಲ್ಲಾಧಿಕಾರಿ ಪಿ.ಸುನೀಲ್‌ ಕುಮಾರ್ ನೇತೃತ್ವದ ಕೋವಿಡ್‌ ವಿಶೇಷ ತಜ್ಞರನ್ನೊಳಗೊಂಡ ಸಮಿತಿ ನಗರದ ಬಂಜಾರಾ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿತು.

ಎಬಿ ಎಆರ್‌ಕೆ ಅಡಿಯಲ್ಲಿ ಅಥವಾ ಸ್ವಂತ ಖರ್ಚಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುವ ಕುರಿತು ಪ್ರತಿ ರೋಗಿಯಿಂದ ಒಪ್ಪಿಗೆ ಪತ್ರ ಪಡೆದುಕೊಳ್ಳಬೇಕು .ಎಬಿ ಎಆರ್‌ಕೆ ಅಡಿಯಲ್ಲಿ ನೀಡುವ ಚಿಕಿತ್ಸೆಗಳ ವಿವರದ ಬೋರ್ಡ್‍ಗಳನ್ನು ಸಾರ್ವಜನಿಕರಿಗೆ ಕಾಣಿಸುವಂತೆ ಪ್ರದರ್ಶಿಸಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜಕುಮಾರ ಯರಗಲ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಎಲ್ ಲಕ್ಕಣ್ಣವರ, ಅಲ್ ಅಮೀನ್‌ ವೈದ್ಯಕೀಯ ಮಹಾವಿದ್ಯಾಲಯದ ಡಾ.ರಾಜೇಂದ್ರಕುಮಾರ್, ಬಿಎಲ್‍ಡಿಇ ವೈದ್ಯಕೀಯ ಮಹಾವಿದ್ಯಾಲಯದ ಡಾ.ಸಂತೋಷ ನೇಮಿಗೌಡ, ಐಎಂಎ ಅಧ್ಯಕ್ಷ ಡಾ.ಸಂತೋಷ ನಂದಿ, ಸ್ವಯಂ ಸೇವಾ ಸಂಸ್ಥೆಯ ಪೀಟರ್ ಅಲೆಕ್ಸಾಂಡರ್ ಉಪಸ್ಥಿತರಿದ್ದರು.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *