Breaking News

ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು : 4 ಜನ ಸಾವು


ಗುಂಟೂರು : ಕಾರೊಂದು ಕೆರೆಗೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಯರ್ರಬಾಲೆಂ ತಿರುವುನಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಒಂದೇ ಕುಟುಂಬದ ನಾಲ್ವರು ಪ್ರಾಣ ಕಳೆದುಕೊಂಡಿದ್ದಾರೆ.

ಮೃತಪಟ್ಟವರನ್ನು ಸಾಯಿ, ಶ್ರೀನಿವಾಸ್, ನರೇಂದ್ರಕುಮಾರ್ ಹಾಗೂ ತೇಜರಾಮ್‌ಜಿ ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ. ಸಾಯಿ, ಶ್ರೀನಿವಾಸ್, ನರೇಂದ್ರ ಕುಮಾರ್ ಅವರು ಮಂಗಳಗಿರಿ ಮೂಲದವರಾಗಿದ್ದರೆ, ತೇಜರಾಮ್‌ಜಿ ಯರ್ರಬಾಲೆಂನವರು ಎನ್ನಲಾಗಿದೆ.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *