Breaking News

ಕಾಂಗ್ರೆಸ್ ಮೇಕೆದಾಟು ಯೋಜನೆ ಪಾದಯಾತ್ರೆ ಬಗ್ಗೆ ಟೀಕೆ ಮಾಡಿದ ಕುಮಾರಸ್ವಾಮಿ



ಬೆಂಗಳೂರು: ಮೇಕೆದಾಟು ಯೋಜನೆಗೆ ಡಿಪಿಆರ್ ಮಾಡಿಸಿದ್ದೆವು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆ ಸುಳ್ಳು. ಕಾಂಗ್ರೆಸ್ ಅಧಿಕಾರದಲ್ಲಿ ಯಾವುದೇ ಡಿಪಿಆರ್ ಮಾಡಿಲ್ಲ.  ಕಾಂಗ್ರೆಸ್ ನಾಯಕರ ಪಾದಯಾತ್ರೆ ಬಗ್ಗೆ ನನಗೆ ಯಾವುದೇ ಆತಂಕವಿಲ್ಲ, ಅವರು ಇನ್ನು 5 ವರ್ಷ ಬೇಕಾದರೂ ಪಾದಯಾತ್ರೆ ಮಾಡಲಿ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಮಾರಸ್ವಾಮಿ, ನಾನು ಸಿಎಂ ಆಗಿದ್ದಾಗ ಹಲವು ನೀರಾವರಿ ಯೋಜನೆ ಜಾರಿಗೆ ತಂದಿದ್ದೆ ಎಂದರು. ಜನವರಿ 26ರಿಂದ ಜೆಡಿಎಸ್ ಆರಂಭಿಸಬೇಕಿದ್ದ ಜಲಧಾರೆ ಕಾರ್ಯಕ್ರಮ ಮುಂಡೂಡಲಾಗಿದೆ. ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯೋಜನೆಯಿಂದ ಹಿಂದೆ ಸರಿದೆವು. 20 ದಿನಗಳ ಕಾಲ ಕಾರ್ಯಕ್ರಮ ಮುಂದೂಡಿದ್ದೇವೆ ಎಂದು ಹೇಳಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *