Breaking News

ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು : ಮಹೇಶ ಜೋಶಿ

ಬೆಂಗಳೂರು: ‘ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಸಾಹಿತಿ ಚೆನ್ನವೀರ ಕಣವಿ ಅವರ ವೈದ್ಯಕೀಯ ವೆಚ್ಚವನ್ನು ಸರ್ಕಾರ ಭರಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಆಗ್ರಹಿಸಿದ್ದಾರೆ.

ಈ ಬಗ್ಗೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ‘ಕಣವಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದು, ಧಾರವಾಡದ ಎಸ್.ಡಿ.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಗೌರವ ಸಂಕೇತವಾಗಿ ಅವರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು’ ಎಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Share News

About admin

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *