ಹೊಸಪೇಟೆ(ವಿಜಯನಗರ): ‘ಗಣರಾಜ್ಯೋತ್ಸವದ ದಿನ ಜಿಲ್ಲಾಮಟ್ಟದ ಕಚೇರಿಗಳ ಸಂಕೀರ್ಣ ಉದ್ಘಾಟನೆ ಹಾಗೂ ಗುಂಡಾ ಸಸ್ಯ ಉದ್ಯಾನದಲ್ಲಿ ₹32 ಲಕ್ಷದಲ್ಲಿ ಅಭಿವೃದ್ಧಿಪಡಿಸಲಾಗಿರುವ ‘ಅಕ್ವೇರಿಯಂ’ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಉದ್ಘಾಟಿಸುವರು.ಬೆಳಿಗ್ಗೆ 9ಕ್ಕೆ ನಗರದ ಕ್ರೀಡಾಂಗಣದಲ್ಲಿ ಸಚಿವರು ತ್ರಿವರ್ಣ ಧ್ವಜಾರೋಹಣ ನೆರವೇರಿಸುವರು. ಬಳಿಕ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸುವರು
ಎಂದು ಜಿಲ್ಲಾಧಿಕಾರಿ ಅನಿರುದ್ಧ್ ಪಿ. ಶ್ರವಣ್ ತಿಳಿಸಿದರು.
ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಅವರನ್ನು ಸನ್ಮಾನಿಸುವರು. ಕಾರ್ಯಕ್ರಮದ ನಂತರ ಸಚಿವರು ಕಚೇರಿ ಸಂಕೀರ್ಣ, ಅಕ್ವೇರಿಯಂ ಉದ್ಘಾಟಿಸುವರು ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

