Breaking News

57 ಪೊಲೀಸ್ ರಿಗೆ ಕೊರೋನಾ ದೃಢ

ಬೆಳಗಾವಿ:  ಕೋವಿಡ್ ಸೋಂಕು ಹೆಚ್ಚಳವಾಗುತ್ತಿದ್ದು, ಮಹಾನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಇನ್ಸಪೆಕ್ಟರ್ ಸೇರಿ 35, ಜಿಲ್ಲೆಯ 8 ಹಾಗೂ ಕೆಎಸ್‌ಆರ್‌ಪಿ ತುಕಡಿಯ 14 ಪೊಲೀಸ್ ಪೇದೆಗಳು ಸೇರಿ ಒಟ್ಟು 57 ಮಂದಿಗೆ ಕೋವಿಡ್ ಸೋಂಕು ವಕ್ಕರಿಸಿದೆ.ಈ ಪೈಕಿ ಇಬ್ಬರು ಗುಣಮುಖರಾಗಿದ್ದಾರೆ.

ಎಪಿಎಂಸಿ ಪೊಲೀಸ್ ಠಾಣೆಯಲ್ಲಿ 11 ಮಂದಿಗೆ ಸೋಂಕು ತಗುಲಿದೆ. ಮಂಗಳವಾರ ಇಡೀ ಠಾಣೆಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಸೋಂಕು ತಗುಲಿದ ಎಲ್ಲರೂ ಕೋವಿಡ್ ಲಸಿಕೆಯ ಎರಡು ಡೋಸ್ ಪಡೆದುಕೊಂಡಿದ್ದಾರೆ. ಕೆಲವರಿಗೆ ರೋಗ ಲಕ್ಷಣಗಳು ಇದ್ದು, ಆದರೆ ಯಾರಿಗೂ ಗಂಭೀರ ಸಮಸ್ಯೆ ಇಲ್ಲ. ಆತಂಕ ಪಡುವ ಅಗತ್ಯವೂ ಇಲ್ಲ ಎಂದು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ತಿಳಿಸಿದರು.

Share News

About admin

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *