Breaking News

ಎಸ್‌ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಬಂಧನ


ಚಿತ್ರದುರ್ಗ: ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಘಟಕದ ಅಧ್ಯಕ್ಷ ಎಚ್‌. ಶ್ರೀನಿವಾಸ್‌ ಅಲಿಯಾಸ್‌ ಬಾಳೆಕಾಯಿ ಸೀನ ಎಂಬುವರನ್ನು ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

‘ಶ್ರೀನಿವಾಸ್‌ ಅವರು ಅಪರಾಧ ಚಟುವಟಿಕೆಯ ಹಿನ್ನೆಲೆ ಹೊಂದಿದ್ದಾರೆ. ಮರಳು ದಂಧೆಯಲ್ಲಿ ಭಾಗಿಯಾಗಿದ್ದ ಅವರ ವಿರುದ್ಧ ಹತ್ತಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿವೆ. ವಿವಿಧ ಕೋಮುಗಳ ನಡುವೆ ಸಂಘರ್ಷ ಉಂಟು ಮಾಡುವ ಅಪಾರಾಧ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದರು. ಹೀಗಾಗಿ, ರೌಡಿ ಪಟ್ಟಿಗೆ ಸೇರ್ಪಡೆಗೊಂಡಿದ್ದರು’ .

ಗೂಂಡಾ ಕಾಯ್ದೆಯಡಿ ಜಿಲ್ಲಾಧಿಕಾರಿ ಕವಿತಾ ಎಸ್‌.ಮನ್ನಿಕೇರಿ ಮಾಡಿದ ಆದೇಶದನ್ವಯ ಶ್ರೀನಿವಾಸ್‌ ಅವರನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *