ಕೋಲಾರ: ಶಾಲಾ ಮಕ್ಕಳು ಸೇರಿದಂತೆ 3 ಸಾವಿರಕ್ಕೂ ಅಧಿಕ ಮಂದಿ ಸೋಂಕಿತರಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಕರಣ ವಿಪರೀತವಾಗಿ ಹರಡುತ್ತಿದೆ. ಈ ಪೈಕಿ ಬಹುತೇಕ ಸೋಂಕಿತರು ಮನೆಗಳಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು ಆಸ್ಪತ್ರೆಗಳ ಮೇಲೆ ಒತ್ತಡ ಇಲ್ಲವಾಗಿದೆ.
ಮಾರಣಾಂತಿಕವಲ್ಲದ ಕೊರೊನಾ 3ನೇ ಅಲೆ ಎದುರಿಸಲು ಜಿಲ್ಲಾಡಳಿತ ಮನೆಗಳಿಗೆ ಔಷಧಿ ವಿತರಿಸಲು, ರೋಗಿಗಳ ಮಾಹಿತಿ ಸಂಗ್ರಹಿಸಲು ಮತ್ತು ಕೋವಿಡ್ ಮಾರ್ಗಸೂಚಿ ಪಾಲನೆ ನಿಗಾವಹಿಸಲು ವ್ಯವಸ್ಥೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

