ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವೃತ್ತಕ್ಕೆ ಡಿಕ್ಕಿಯಾಗಿ ಧಾರವಾಡ ಎಸ್ಡಿಎಂ ಎಂಬಿಬಿಎಸ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲಾಧಿಕಾರಿ ನಿವಾಸದ ಬಳಿ ನಡೆದಿದೆ.
ವಿದ್ಯಾರ್ಥಿ ಅತೀ ವೇಗವಾಗಿ ಕಾರು ಚಲಾಯಿಸಿದ್ದು, ನಿಯಂತ್ರಣ ತಪ್ಪಿ ವೃತ್ತಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ.
ಸದ್ಯ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

