Breaking News

ಭೀಕರ ಅಪಘಾತ : ಸ್ಥಳದಲ್ಲಿಯೇ ವ್ಯಕ್ತಿ ಸಾವು



ಗದಗ: ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ  ಅಪಘಾತದಲ್ಲಿ ಇಬ್ಬರು ಸಾವಿಗೀಡಾಗಿದ್ದ ಘಟನೆ  ಗದಗ ತಾಲೂಕಿನ ಹರ್ಲಾಪುರ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.

ಯಲ್ಲಪ್ಪಗೌಡ ವೆಂಕನಗೌಡ (50) ಸ್ಥಳದಲ್ಲೇ ಸಾವಿಗೀಡಾದರೆ, ಲೋಕೇಶ್ ಗುಡಕೇರಿ ಎಂಬಾತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.

ಸಾವಿಗೀಡಾದ ಯಲ್ಲಪ್ಲಗೌಡ ಹಾಗೂ ಲೋಕೇಶ್ ಗದಗ ತಾಲೂಕಿನ ಶ್ಯಾಗೋಟಿ ಗ್ರಾಮದ ನಿವಾಸಿಗಳು. ಇಬ್ಬರೂ ಒಂದೇ ಬೈಕ್​ನಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತವಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Share News

About admin

Check Also

ನಂಬಿಸಿ ಕೊಂದ ಪಾಪಿ ಪ್ರಿಯಕರ : ಶವ ಪೊದೆಗೆ ಎಸೆದು ನಾಪತ್ತೆ ನಾಟಕವಾಡಿದ್ದ ಯೋಧ ಜೈಲಿಗೆ

ಬೆಳಗಾವಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಪ್ರಿಯತಮೆಯನ್ನು ಗೋಕಾಕ್ ಫಾಲ್ಸ್‌ಗೆ ಕರೆದೊಯ್ದು ಕೊಲೆ ಮಾಡಿದ ಆರೋಪದ ಮೇಲೆ ಎಸ್‌ಎಸ್‌ಬಿ ಯೋಧ ಬಸಪ್ಪ ಸಾತಣ್ಣವರ್‌ನನ್ನು …

Leave a Reply

Your email address will not be published. Required fields are marked *