Breaking News

ನಡುರಸ್ತೆಯಲ್ಲೇ ಹೊತ್ತು ಉರಿದ ಬಿಎಂಟಿಸಿ ಬಸ್



ಬೆಂಗಳೂರು: ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ  ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್‌ (KA 57 F 1592) ಬೆಂಕಿಗಾಹುತಿಯಾಗಿದೆ.

ಬಸ್ ಚಲಿಸುತ್ತಿದ್ದಾಗ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಬಸ್ ನ ಇಂಜಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಬಳಿಕ ನೋಡನೋಡುತ್ತಲೇ ಬೆಂಕಿಯ ರಭಸ ಜೋರಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ.

ಈ ವೇಳೆ ಬಸ್ ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಬಳಿಕ ಸಿಬ್ಬಂದಿ ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಕಲ್ಪಿಸಿದ್ದಾರೆ.

ಇನ್ನು ಬಸ್ ನಲ್ಲಿದ್ದ ಫಸ್ಟ್ ಏಯ್ಡ್​ ಹಾಗೂ ಟಿಕೆಟ್ ಹಾಗೂ ದಿನದ ಪಾಸ್ ಗಳು ಬೆಂಕಿಗೆ ಆಹುತಿಯಾಗಿವೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *