ತುಮಕೂರು : ದಾಸೋಹ ಭಾರತೀಯ ಪರಂಪರೆ. ಅನ್ನ, ಅಕ್ಷರ, ವಿದ್ಯೆ ಸೇರಿ ತ್ರಿವಿಧ ದಾಸೋಹದ ಮೂಲಕ ಸಿದ್ಧಗಂಗಾ ಮಠದಿಂದ ಆ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಿದ್ಧಗಂಗಾ ಮಠದಲ್ಲಿ ದಾಸೋಹ ದಿನದ ಅಂಗವಾಗಿ ಮಕ್ಕಳಿಗೆ ಊಟ ಬಡಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಇಂದಿನ ಆಧುನಿಕ ಕಾಲದಲ್ಲೂ ದಾಸೋಹಕ್ಕೆ ಮಹತ್ವ ನೀಡುವ ಉದ್ದೇಶದಿಂದ ಇಂದು ರಾಜ್ಯದಾದ್ಯಂತ ದಾಸೋಹ ದಿನಾಚರಣೆ ಮಾಡಲಾಗುತ್ತಿದೆ. ನಮ್ಮನ್ನು ನಾವು ದಾಸೋಹ ಪರಂಪರೆಯಲ್ಲಿ ಸಮರ್ಪಣೆ ಮಾಡಿಕೊಳ್ಳುವ ದ್ಯೇಯ ಇದರಲ್ಲಿದೆ.ಸರ್ಕಾರದಿಂದ ಅನ್ನದಾಸೋಹ ಮಾಡುವ ಮಠಗಳಿಗೆ ಪಡಿತರ ವಿತರಿಸಲಾಗುತ್ತಿದೆ’ ಎಂದು ಅವರು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

