ಮೈಸೂರು: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಲ್ಲಿಸಿರುವ ಮನವಿಗೆ ಸೊಪ್ಪು ಹಾಕಬೇಡಿ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂವಿಧಾನಬಾಹಿರವಾಗಿ ಆಯ್ಕೆಯಾದ 362 ಮಂದಿ ಸುಪ್ರೀಂಕೋರ್ಟ್ ತೀರ್ಪನ್ನು ಧಿಕ್ಕರಿಸಿ ಒಬ್ಬ ರಾಜಕಾರಣಿಗೆ ಮನವಿ ಸಲ್ಲಿಸುವುದು, ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುವುದು, ಅದನ್ನು ಆಧರಿಸಿ ಮುಖ್ಯಮಂತ್ರಿ ಕ್ರಮ ತೆಗೆದುಕೊಳ್ಳಲು ಮುಂದಾಗುವುದೆಂದರೆ ಏನರ್ಥ’ ಎಂದು ಆಕ್ಷೇಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

