Breaking News

ಗ್ರಂಥ ಪ್ರಕಟಿಸಿದ್ದಾಗ ಬಾಯಿ ಮುಚ್ಚಿಕೊಂಡಿದ್ದೇಕೆ: ಸಿದ್ದರಾಮಯ್ಯ


ಬೆಂಗಳೂರು: ‘ಜಗದೀಶ ಶೆಟ್ಟರ್‌ ನೇತೃತ್ವದ ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್‌ ಅವರನ್ನು ಹಾಡಿ, ಹೊಗಳಿ ಗ್ರಂಥ ಪ್ರಕಟಿಸಿದ್ದಾಗ ಬಾಯಿ ಮುಚ್ಚಿಕೊಂಡಿದ್ದೇಕೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ಕುಮಾರ್‌ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ಗೆ ಟಿಪ್ಪು ಸುಲ್ತಾನ್‌ ಸ್ತಬ್ಧಚಿತ್ರ ಕಳುಹಿಸಿದ್ದನ್ನು ಟೀಕಿಸಿರುವ ಸಚಿವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಬಿಜೆಪಿ ಸರ್ಕಾರ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್‌ ಕುರಿತ ಗ್ರಂಥ ಈಗಲೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗ್ರಂಥಾಲಯದಲ್ಲಿದೆ. ಇದು ಇಲಾಖೆ ಸಚಿವರಾಗಿರುವ ಸುನೀಲ್‌ಕುಮಾರ್‌ ಗಮನಕ್ಕೆ ಬಂದಿಲ್ಲವೆ? ಯಾಕೆ ಈ ಆತ್ಮವಂಚನೆ?’ ಎಂದು ಕೇಳಿದ್ದಾರೆ.

Share News

About admin

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *