ಬೆಂಗಳೂರು: ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ.
‘ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್ ಬಗ್ಗೆ ಮಾತನಾಡುತ್ತೀರಾ’ ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? ಅಥವಾ ಕಾಂಗ್ರೆಸ್ನ ಪಿತ್ರಾರ್ಜಿತ ಆಸ್ತಿಯಾ? ಚಾಮುಂಡೇಶ್ವರಿ ಕ್ಷೇತ್ರದಿಂದ ನಿಮ್ಮನ್ನು ಜನರು ಓಡಿಸಿದ್ದು ಮರೆತುಬಿಟ್ಟಿರಾ? ಈ ಸಲ ಬಾದಾಮಿ ಕ್ಷೇತ್ರದಿಂದಲೂ ಓಡಬೇಕಾಗುತ್ತದೆ, ಕಾಯಿರಿ ಎಂದು ನೇರವಾಗಿ ವಾಗ್ದಾಳಿ ನಡೆಸಿದ್ದಾರೆ.
ಹೀಗಾಗಿ ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

