ಅಮೇರಿಕಾ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ಪ್ರೀಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ಸಂತಸ ಹಂಚಿಕೊಂಡಿದ್ದಾರೆ.
ನಿನ್ನೆ ಸಂಜೆ ಅಮೆರಿಕದ ಕ್ಯಾಲಿಫೋರ್ನಿಯಾ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಪ್ರಿಯಾಂಕಾ ಚೋಪ್ರಾ ಅವರಿಗೆ ಹೆರಿಗೆ ಮಾಡಿಸಲಾಗಿದೆ.ಮಗು ಹಾಗೂ ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸಾಮಾಜಿಕ ಜಾಲತಾಣದಲ್ಲಿ ಪ್ರಿಯಾಂಕಾ ಹಾಗೂ ಪತಿ ನಿಕ್ ಜೋನ್ಸ್ ದಂಪತಿ, ‘ನಮಗೆ ಹೆಣ್ಣು ಮಗು ಜನಸಿದೆ ಎಂದು ದೃಢಪಡಿಸುತ್ತಿದ್ದೇವೆ. ಈ ಸಂದರ್ಭದಲ್ಲಿ ನಮ್ಮ ಖಾಸಗಿತನಕ್ಕೆ ಅವಕಾಶ ಕೊಡಿ’ ಎಂದು ಮನವಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

