Breaking News

ನಿಮ್ಮ ಸ್ವಾರ್ಥಕ್ಕಾಗಿ ಸಮಾಜವನ್ನು ಒಡೆಯಬೇಡಿ : ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ


ಬೆಂಗಳೂರು: ನಿಮ್ಮ ಸ್ವಾರ್ಥ ಸಾಧನೆಗಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ನೇರ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಶಾಲಿ ಸಮುದಾಯವನ್ನು ಒಗ್ಗೂಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ಹೋರಾಟ ಮಾಡಿದ್ದೇವೆ. ದಯವಿಟ್ಟು ಸಮಾಜವನ್ನು ಒಡೆಯುವ ಕೆಲಸ ಮಾಡಬೇಡಿ ಎಂದು ನಿರಾಣಿಗೆ ಮನವಿ ಮಾಡಿದರು.

Share News

About admin

Check Also

3 ವರ್ಷದಿಂದ ಪ್ರೀತಿಸುವಂತೆ ಕಿರುಕುಳ: ಒಪ್ಪದಿದ್ದಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವತಿಯನ್ನು ತಬ್ಬಿಕೊಂಡ ಯುವಕ!

ಮೈಸೂರು: ಪ್ರೇಮ ನಿರಾಕರಿಸಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ಆರೋಪದ ಯುವಕನೊಬ್ಬ, ಮೈಸೂರಿನ ವಿಜಯನಗರದ ಡಿಪ್ಲೊಮಾ ಕಾಲೇಜು ಹಾಸ್ಟೆಲ್ ಬಳಿ ಬೆಂಕಿಯಿಂದ …

Leave a Reply

Your email address will not be published. Required fields are marked *