ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಜೆಡಿಎಸ್ ಪಕ್ಷವು ಬಿಜೆಪಿಯ ಬಾಲಂಗೋಚಿ, ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ, ಆ ಪಕ್ಷಕ್ಕೆ ಸಿದ್ದಾಂತವಿಲ್ಲ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾ ಪ್ರಹಾರ ನಡೆಸಿದ್ದರು.
ಅದರ ಉತ್ತರವಾಗಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಸಿದ್ದರಾಮಯ್ಯ, ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಜನರ ತೀರ್ಪನ್ನು ಸ್ವೀಕಾರ ಮಾಡಲೇಬೇಕು ಎಂದರು. ಇನ್ನು ಕುಮಾರಸ್ವಾಮಿ ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆ ನಾನು ಸೋತ್ತಿದ್ದೇನೆ. ಯಾಕೆ ಕುಮಾರಸ್ವಾಮಿ ಸೋತಿಲ್ವಾ, ಅವರಪ್ಪ ಸೋತಿಲ್ಲಾ, ಮಗ ಸೋತಿಲ್ವಾ ಎಂದು ತಿರುಗೇಟು ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

