ಬೆಂಗಳೂರು : ‘ನಾನು ಈ ಹಿಂದೆಯೇ ಹೇಳಿದ್ದೆ. ಇದು ಬಿಜೆಪಿ ಕರ್ಫ್ಯೂ. ಅವರಿಗೆ ಬೇಕಾದಾಗ ವಿಧಿಸುತ್ತಾರೆ, ಬೇಡವಾದಾಗ ತೆರವುಗೊಳಿಸುತ್ತಾರೆ ಎಂದು ವೀಕೆಂಡ್ ಕರ್ಫ್ಯೂ ಹಿಂಪಡೆದ ಬೆನ್ನಲ್ಲೇ ಶನಿವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಿಡಿ ಕಾರಿದರು.
ನಾವು ಪಾದಯಾತ್ರೆ ಮಾಡುತ್ತೇವೆ ಎಂಬ ಕಾರಣಕ್ಕೆ ಜನರಿಗೆ ಕೊಡಬಾರದ ಕಷ್ಟ ಕೊಟ್ಟರು. ಇದರಿಂದ ಜನರಿಗೆ ಸಾವಿರಾರು ಕೋಟಿ ರುಪಾಯಿ ನಷ್ಟವಾಗಿದೆ. ಹಣ್ಣು, ತರಕಾರಿ ಬೆಳೆಯುವವರ, ಮಾರುವವರ ಪರಿಸ್ಥಿತಿ ಏನಾಗಿದೆ ಎಂದು ನೀವೇ ನೋಡಿದ್ದೀರಿ. ಕೆಎಸ್‌ಆರ್ಟಿಸಿ, ಮೆಟ್ರೋದಲ್ಲಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು, ವಿಮಾನಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಪ್ರಯಾಣ ಮಾಡಬಹುದು. ಬಡವರು, ಹೊಟೇಲ್ ನವರು, ಚಿತ್ರಮಂದಿರಗಳವರು ಹಾಗೂ ಇತರರು ಶೇ.50 ರಷ್ಟು ಮಾತ್ರ ವ್ಯಾಪಾರ ಮಾಡಬೇಕಂತೆ. ಕುಟುಂಬ ಸದಸ್ಯರು ವಾಹನಗಳಲ್ಲಿ ಸಂಚಾರ ಮಾಡುವಾಗ ಶೇ.50 ರಷ್ಟು ನಿಯಮ ಪಾಲನೆ ಮಾಡಲು ಸಾಧ್ಯವೇ? ಸರ್ಕಾರ ಪ್ರಾಯೋಗಿಕವಾಗಿ ಯೋಚಿಸಬೇಕು. ಈ ಸರ್ಕಾರ ಆ ರೀತಿ ಯೋಚಿಸುತ್ತಿಲ್ಲ ಎಂದು ಕಿಡಿ ಕಾರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

