ಮೈಸೂರು: ‘ಸಚಿವ ಎಸ್.ಟಿ.ಸೋಮಶೇಖರ್ ಅವರು ಕೇವಲ ಬಾವುಟ ಹಾರಿಸಲು ಮೈಸೂರು ಜಿಲ್ಲೆಗೆ ಬಂದು ಹೋಗುವ ಮಂತ್ರಿ ಆಗಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅನುದಾನ ಬಿಡುಗಡೆ ಮಾಡಿ, ಶಂಕುಸ್ಥಾಪನೆ ನೆರವೇರಿಸಿದ್ದ ಕಾಮಗಾರಿಗಳನ್ನು ಉದ್ಘಾಟಿಸುತ್ತಿದ್ದಾರೆ’ ಎಂದು ಹುಣಸೂರು ಶಾಸಕ ಕಾಂಗ್ರೆಸ್‌ನ ಎಚ್.ಪಿ.ಮಂಜುನಾಥ್ ಹರಿಹಾಯ್ದರು.
‘ಸಚಿವರು ಜಿಲ್ಲೆಗೆ ಇದುವರೆಗೆ ಯಾವುದೇ ಕೊಡುಗೆ ನೀಡಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಗೆ ₹ 22,365 ಕೋಟಿ ವಿಶೇಷ ಅನುದಾನ ನೀಡಿ ಅಭಿವೃದ್ಧಿಗೆ ಕಾರಣರಾಗಿದ್ದಾರೆ. ಮೈಸೂರು ಮಹಾನಗರಕ್ಕೇ ₹ 3,800 ಕೋಟಿ ನೀಡಿದ್ದಾರೆ. ಜಿಲ್ಲೆಗೆ ಸೋಮಶೇಖರ್ ಇದುವರೆಗೆ ನೀಡಿರುವ ಕೊಡುಗೆ ಏನು ಎಂದು ಶ್ವೇತಪತ್ರ ಹೊರಡಿಸಲಿ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

