ನವದೆಹಲಿ: ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) ಟ್ವಿಟರ್ ಖಾತೆಯನ್ನು ಶನಿವಾರ ತಡರಾತ್ರಿ ಹ್ಯಾಕ್ ಮಾಡಲಾಗಿದೆ ಎಂದು ಅಧಿಕಾರಿಗಳು ಖಚಿತಪಡಿಸಿದ್ದಾರೆ.
ತಾಂತ್ರಿಕ ತಜ್ಞರು ಈ ಕುರಿತು ಪರಿಶೀಲಿಸುತ್ತಿದ್ದು, ಎನ್‌ಡಿಆರ್‌ಎಫ್ ಖಾತೆಯನ್ನು ಶೀಘ್ರದಲ್ಲೇ ಮರುಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್‌ಡಿಆರ್‌ಎಫ್ ಮಹಾನಿರ್ದೇಶಕ ಅತುಲ್ ಕರ್ವಾಲ್, ‘ಶನಿವಾರ ರಾತ್ರಿ ಎನ್‌ಡಿಆರ್‌ಎಫ್ ಖಾತೆ ಹ್ಯಾಕ್ ಆಗಿದೆ. ಈ ಬಗ್ಗೆ ಪರಿಶೀಲಿಸಲಾಗುತ್ತಿದೆ’ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

