ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ (ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರಕಾರ ಕರಡು ಅಧಿಸೂಚನೆ ಪ್ರಕಟಿಸಿದೆ.
ಈ ಬಾರಿ ಎಂಜಿನಿಯರಿಂಗ್ ಶಿಕ್ಷಣ ಪಡೆದಿರುವವರಿಗೂ ಶಿಕ್ಷಕರಾಗುವ ಅವಕಾಶ ಕಲ್ಪಿಸಿದೆ. 45 ವರ್ಷಗಳ ವರೆಗಿನ ವಯೋಮಿತಿ ನೀಡಲಾಗಿದೆ. ಪದವಿಯಲ್ಲಿ ಶೇ.50ರಷ್ಟು ಅಂಕ ಮತ್ತು ‘ಬಿ.ಇಡಿ’ ವಿದ್ಯಾರ್ಹತೆ ಹೊಂದಿದವರನ್ನು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಪದವಿ ಮತ್ತು ಬಿ.ಇಡಿ.ಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಶೇ.50ರಷ್ಟು ಸ್ಪರ್ಧಾತ್ಮಕ ಪರೀಕ್ಷೆ ಅಂಕ, ಶೇ.20ರಷ್ಟು ಟಿಇಟಿ ಪರೀಕ್ಷೆ ಅಂಕ, ಶೇ.20ರಷ್ಟು ಪದವಿ ಪರೀಕ್ಷೆ ಅಂಕ ಹಾಗೂ ಶೇ.10ರಷ್ಟು ಬಿ.ಇಡಿ. ಶಿಕ್ಷಣದ ಅಂಕಗಳನ್ನು ಪರಿಗಣಿಸಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

