ತುಮಕೂರು: ಕಾಶಾಪುರ ರಸ್ತೆಯ ತಿರುವಿನಲ್ಲಿ ಬೇವಿನ ಮರಕ್ಕೆ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬಿಕ್ಷುಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಕಾಶಪುರದ ಮುಖ್ಯರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದ ಬಿಕ್ಷುಕನ ಮೇಲೆ ಬಸ್ ಹರಿದು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ನಂತರ ಅದೇ ಬಸ್ ರೈತ ಗೋಪಾಲಯ್ಯ ಎಂಬುವವರ ಮೇಲೆಯು ಹರಿದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಗೋಪಾಲಯ್ಯ ಆಸ್ಪತ್ರೆಯಲ್ಲಿ ಮೃತ ಪಟ್ಟಿದ್ದಾರೆ.
ಸರಕಾರಿ ಬಸ್ಸಿನ ಚಾಲಕ ಅಪಘಾತದ ನಂತರ ಸ್ಥಳದಿಂದ ಪರಾರಿ ಆಗಿದ್ದಾರೆ. ನಿರ್ವಾಹಕ ಸೇರಿ ಬಸ್ಸಿನಲ್ಲಿದ್ದ 8 ಜನರಿಗೆ ಗಾಯವಾಗಿದೆ. ಗಾಯಾಳುಗಳನ್ನು ಕೊರಟಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಈ ಕುರಿತು ಕೊರಟಗೆರೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

